ದೇವರಿಗೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಬೆಂಕಿಗಾಹುತಿ!: ತುಮಕೂರಿನ ಶಿರಾದಲ್ಲಿ ಘಟನೆ


ಶಿರಾ: ಶಾಲಾ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ವಿದ್ಯಾರ್ಥಿನಿಯ ಬಟ್ಟೆಗೆ ಆಕಸ್ಮಿಕವಾಗಿ ಬೆಂಕಿತಗುಲಿದ ಘಟನೆ ಮಾ.13ರಂದು ನಡೆದಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಇಂದು ಸಾವನ್ನಪ್ಪಿದ್ದಾಳೆ.

ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ತನ್ನ ಇಬ್ಬರು ಸ್ನೇಹಿತೆಯರ ಜೊತೆ ಸಮೀಪದ ದೇವಸ್ಥಾನಕ್ಕೆ ತೆರಳಿ ದೇವರಿಗೆ ದೀಪ ಹಚ್ಚಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಆಕೆಯ ಬಟ್ಟೆಗೆ ಬೆಂಕಿ ಹತ್ತಿಕೊಂಡಿತ್ತು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೆ ಇಂದು ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

error: Content is protected !!