ಬೆಳ್ತಂಗಡಿ: ಲೋಕಸಭಾ ಚುನಾವಣೆಯ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಕಾರ್ಯಚಟುವಟಿಕೆಗಳು ಪ್ರಾರಂಭವಾಗಿದೆ.ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಗೊಳಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಬಲ್ಲ ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರಕ್ಕೆ ಪದ್ಮರಾಜ್ ಅರ್. ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೇಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂಬ ಮಾಹಿತಿಯೂ ಲಭ್ಯವಾಗುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡು ವರಿಷ್ಠರ ಕೈ ಸೇರಿದೆ.ರಾಜ್ಯದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಖಚಿತ ಎಂಬ ಮಾಹಿತಿಯೂ ಎಲ್ಲೆಡೆ ಹರಿದಾಡುತ್ತಿದೆ.
ಬಿಜೆಪಿಯ ಭದ್ರ ಕೋಟೆಯಾಗಿರುವ ದ.ಕ. ಜಿಲ್ಲೆಯಲ್ಲಿ ಕಳೆದ 3 ದಶಕಗಳಲ್ಲಿ ಬಿಜೆಪಿಯ ಸಂಸದರಿದ್ದಾರೆ. ಈ ಬಾರಿ ಮಾತ್ರ ಬಿಜೆಪಿಯಲ್ಲಿ ಬೃಜೇಶ್ ಚೌಟ ಹಾಗೂ ಕಾಂಗ್ರೆಸ್ ನಲ್ಲಿ ಪದ್ಮರಾಜ್ ಅವರಿಗೆ ನೀಡಿದ್ದಲ್ಲಿ ಹೊಸ ಮುಖಗಳಿಗೆ ಪಕ್ಷಗಳು ಅವಕಾಶ ಕೊಟ್ಟಂತಾಗುತ್ತದೆ.ಅದ್ದರಿಂದ ಇಬ್ಬರ ಹಣಾಹಣಿ ತೀವ್ರ ಕುತೂಹಲ ಕೆರಳಿಸಿದೆ. ಪದ್ಮರಾಜ್ ಆರ್. ಅವರು ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜನಾರ್ಧನ ಪೂಜಾರಿಯವರ ಆಪ್ತರಲ್ಲದೇ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿಯಾಗಿ ಹಲವಾರೂ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.ಅದಲ್ಲದೇ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿದ್ದು ಪಕ್ಷದ ಹಿರಿಯರನ್ನು,ಪ್ರಮುಖರನ್ನು ಕಾರ್ಯಕರ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸುತಿದ್ದಾರೆ ಅವರು ಕೂಡ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಹಲವಾರೂ ಸಮಾಜ ಮುಖಿ ಕೆಲಸಗಳಲ್ಲಿ ತನ್ನನ ತಾನು ಗುರುತಿಸಿಕೊಂಡು ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಎನಿದ್ದರೂ ಇದೇ ಬರುವ ಎ 26 ರಂದು ನಡೆಯುವ ಚುನಾವಣೆಯಂದು ಮತದಾರರು ಯಾರನ್ನು ಆಯ್ಕೆ ಮಾಡುತ್ತಾರೆ ಎಂದು ಕಾದು ನೋಡಬೇಕಾಗಿದೆ.