ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 21ನೇ ಆರೋಪಿ ಮೊಹಮ್ಮದ್ ಜಬೀರ್‌ನ ಜಾಮೀನು ವಜಾ: ಹೈಕೋರ್ಟ್ ವಿಭಾಗೀಯ ಪೀಠದಿಂದ ಜಾಮೀನು ನಿರಾಕರಣೆ

ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬAಧಿಸಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಬೀರ್ ಎಂಬಾತನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ನಿವಾಸಿಯಾದ 35 ವರ್ಷದ ಜಬೀರ್, ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜಬೀರ್ 21ನೇ ಆರೋಪಿಯಾಗಿದ್ದು, ಈತನ ವಿರುದ್ಧ ಐಪಿಸಿ ಸೆಕ್ಷನ್ 302, ಶಸ್ತ್ರಾಸ್ತ್ರ ಕಾಯಿದೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 2022ರ ನವೆಂಬರ್ 7ರಂದು ಜಬೀರ್ ಬಂಧನವಾಗಿತ್ತು.

ಅರ್ಜಿದಾರರ ಪರ ವಕೀಲರು, ವಿಚಾರಣಾ ನ್ಯಾಯಾಲಯದಲ್ಲಿ (ವಿಶೇಷ ನ್ಯಾಯಾಲಯ) ಎನ್‌ಐಎ ಪರವಾಗಿ ಹಾಜರಾಗಿ ಅರ್ಜಿದಾರರ ಕಸ್ಟಡಿ ಆದೇಶ ವಿಸ್ತರಿಸುವಂತೆ ಕೋರಿರುವವರು ವಿಶೇಷ ಸರ್ಕಾರಿ ಅಭಿಯೋಜಕರಲ್ಲ. ಅಲ್ಲದೇ, ಅವರ ಮೌಖಿಕ ಕೋರಿಕೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಪರಿಗಣಸಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿದಾರರ ಪರ ವಾದ, ಕೃತಕ ಮತ್ತು ತಾಂತ್ರಿಕವಾಗಿದೆ. ಅಮೀನ್ ಅವರ ವಾದ ಒಪ್ಪಿದರೆ ವಕೀಲರ ಜೂನಿಯರ್ ಅಥವಾ ಸಹೋದ್ಯೋಗಿ ಅವರ ಪರವಾಗಿ ಹಾಜರಾಗುವಂತಿಲ್ಲ ಎಂಬುದಾಗಲಿದೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತು.

error: Content is protected !!