ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ: ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗಳು ಬೈಕ್ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರವಾಹನ ಸಂಚಾರದ ವೇಳೆ ಹೆಲ್ಮೆಟ್ ನಿರ್ದಿಷ್ಟತೆಯ ಪಾಲನೆ ಮಾಡುವಂತೆ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ. ಅಲ್ಲದೆ ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿದ್ದು, ಅದರಲ್ಲಿಯೂ ಹೆಲ್ಮೆಟ್ ಇಲ್ಲದೇ ಅಧಿಕಾರಿ ಮತ್ತು ಸಿಬ್ಬಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ ಮತ್ತೆ ಈ ರೀತಿಯ ಅಪಘಾತಗಳು ಮರು ಕಳುಹಿಸದಂತೆ ಕ್ರಮಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

error: Content is protected !!