ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್ ಐ ಪರೀಕ್ಷೆ ಮುಂದೂಡಿಕೆ: ಮೇ 8ಕ್ಕೆ ನಿಗಧಿಯಾಗಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆ

ಬೆಂಗಳೂರು: ಮೇ 8ಕ್ಕೆ ನಿಗದಿಯಾಗಿದ್ದ ಪಿಎಸ್ ಐ ಪರೀಕ್ಷೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್), ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಿತ್ತು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವ ಮೇ.8ಕ್ಕೆ ನಿಗದಿಯಾದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮುಂದಿನ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೈಬ್‌ಸೈಟ್‌ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.

error: Content is protected !!