ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ: ಲೋಕಸಭಾ ಚುನಾವಣಾ ಹಿನ್ನಲೆ ‘ಚುನಾವಣಾ ನಿರ್ವಹಣಾ ಸಮಿತಿಯ’ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಾ.21ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅವರು, ಲೋಕಸಭಾ ಚುನಾವಣೆಯಲ್ಲಿ ನಿರ್ವಹಣಾ ಸಮಿತಿ ನಿರ್ವಹಿಸಬೇಕಾದ ಕಾರ್ಯನಿರ್ವಹಣೆಗಳ ಬಗ್ಗೆ, ಬೂತ್ ಸಮಿತಿಗಳ ಕಾರ್ಯನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಲೋಕಸಭಾ ಚುನಾವಣಾ ಮಂಡಲ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವಂದಿಸಿದರು.

error: Content is protected !!