ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿ: ದ.ಕ ಜಿಲ್ಲೆಯ ನಾಲ್ವರು ಸಾವು!

ಮಂಗಳೂರು: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ.

ಕತಾರ್‌ನಿಂದ ಸೌದಿಗೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುವಾಗ ಝುಲ್ಫಾ ಎಂಬಲ್ಲಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು ಬಳಿಕ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಹಳೆಯಂಗಡಿಯ ನಾಲ್ವರು ಮೃತಪಟ್ಟಿದ್ದು ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!