ದ.ಕ.ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್.ಆಯ್ಕೆ:

 

 

 

 

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಆಯ್ಕೆಯಾಗಿದ್ದಾರೆ.ಹಲವಾರು ಆಕಾಂಕ್ಷಿಗಳ ನಡುವೆ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಕೇಂದ್ರ ಸಚಿರಾದ ಜನಾರ್ಧನ ಪೂಜಾರಿಯವರ ಶಿಷ್ಯ ಪದ್ಮರಾಜ್ ಆರ್.‌ವೃತ್ತಿಯಲ್ಲಿ ವಕೀಲರಾಗಿದ್ದು ಯುವ ವಾಹಿನಿಯ ಕೇಂದ್ರ ಸಮಿತಿಯ ಗೌರವ ಸಲಹೆಗಾರರು ಜೆ.ಪಿ. ಪ್ರತಿಷ್ಠಾನ ದಕ್ಷಿಣ ಕನ್ನಡ ಜಿಲ್ಲಾ ಗೌರವ ಸಂಚಾಲಕ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಅದರೆ ಅವರಿಗೆ ಟಿಕೇಟ್ ಕೈ ತಪ್ಪಿತ್ತು ನಂತರ ಅವರನ್ನು ‌ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು ಒಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ ಇಬ್ಬರು ಹೊಸ ಮುಖಗಳು ಲೋಕಸಭಾ ಚುನಾವಣೆಯನ್ನು ಎದುರಿಸುತಿದ್ದು ತೀವ್ರ ಕುತೂಹಲ ಮೂಡಿಸಿದೆ.

error: Content is protected !!