5,8.9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ:

 

 

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶಿಸಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಇದೇ ವೇಳೆ, ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿತು.
ಮೇಲ್ಕಂಡ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠ ಇಂದು ತನ್ನ ತೀರ್ಪು ಹೊರಹಾಕಿದೆ.ರಾಜ್ಯ ಸರ್ಕಾರ ಬೋರ್ಡ್ ಪರೀಕ್ಷೆ ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಇದನ್ನು ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಪೀಠ ಸೂಚಿಸಿದೆ. ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಇದೇ ವೇಳೆ ಪೀಠ ತಿರಸ್ಕರಿಸಿದೆ. ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್​ನಲ್ಲೇ ಸಲ್ಲಿಸುವಂತೆ ಹೈಕೋರ್ಟ್ ತಿಳಿಸಿತು.

error: Content is protected !!