ಬೆಳ್ತಂಗಡಿ: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಮಧ್ಯ ಭಾಗದಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಮೃತ ದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿ ‘ಇಂದು ಪೂರ್ವ ನಿಯೋಜಿತ ಕೊಲೆ’ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಗಂಭೀರವಾಗಿ ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ಪ್ರಕರಣ ಹಿಂದೆ ದೊಡ್ಡ ಶಕ್ತಿ ಇದೆ, ರಾಜ್ಯ ಸರಕಾರ ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಿ, ಆ ಮೂಲಕ ಸೂಕ್ತ ತನಿಖೆ ನಡೆಸಬೇಕೆಂದು. ವ್ಯವಹಾರ ನಿಮಿತ್ತ ಬೆಳ್ತಂಗಡಿ ತಾಲೂಕಿನ ಸಾಹುಲ್, ಮದ್ದಡ್ಕ ನಿವಾಸಿ ಇಸಾಕ್, ಶಿರ್ಲಾಲ್ ನಿವಾಸಿ ಇಮ್ತಿಯಾಝ್ ಈ ಮೂವರನ್ನು ತುಮಕೂರಿಗೆ ಕರೆಸಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಇಂತಹ ಕ್ರೂರ ಕೃತ್ಯದಲ್ಲಿ ಭಾಗಿಯಾದ ಎಲ್ಲಾರಿಗೂ ಶಿಕ್ಷೆಯಾಗಬೇಕು ಮತ್ತು ಮರಣ ಹೊಂದಿದ ಅಮಾಯಕರ ಕುಟುಂಬಕ್ಕೆ ರಾಜ್ಯ ಸರಕಾರ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.