ಬೆಳ್ತಂಗಡಿ : ಕಾರಿಗೆ ಬೆಂಕಿ ಹಚ್ಚಿ ಮೂವರನ್ನು ಕೊಲೆಗೈದ ಪ್ರಕರಣ: ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದ ಲಕ್ಷ ಹಣದ ವಿಚಾರ: ತುಮಕೂರಿಗೆ ತೆರಳುವಾಗ ಕಾರಿನಲ್ಲಿತ್ತು 50 ಲಕ್ಷಕ್ಕೂ ಅಧಿಕ ಹಣ!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಲಭಿಸಿದೆ

ಮೃತಪಟ್ಟ ಮೂವರು ತುಮಕೂರಿಗೆ ತೆರಳುವಾಗ 50 ಲಕ್ಷಕ್ಕೂ ಅಧಿಕ ಹಣವನ್ನು ಕೊಂಡೊಯ್ದಿದ್ದಾರೆ ಎಂದು ಮೃತರ ಮನೆಯವರು ಕೋರಾ ಪೊಲೀಸರಿಗೆ ತಿಳಿಸಿದ್ದಾರೆ.

ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

ಶಿರ್ಲಾಲಿನ ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್‌ನ ಸಾಹುಲ್ ಹಮೀದ್ ಅವರು ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣವನ್ನು ತುಮಕೂರಿಗೆ ತೆಗೆದುಕೊಂಡು ಹೋಗಿದ್ದರು ಎಂದು ಅವರ ಮನೆಯವರು ಹೇಳಿಕೆ ನೀಡಿದ್ದಾರೆ. ಮೂವರು ಸೇರಿ ಒಟ್ಟು 50 ಲಕ್ಷಕ್ಕೂ ಮಿಕ್ಕಿ ಹಣವನ್ನು ತುಮಕೂರಿಗೆ ಕೊಂಡೊಯ್ದಿದ್ದಾರೆ.

ಈ ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದು ಬಂದಿದೆ. ಈ ಮೂವರನ್ನೂ ಪ್ಲಾö್ಯನ್ ಮಾಡಿ ಕರೆಸಿಕೊಂಡ ಆರೋಪಿಗಳು ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ.

ಸದ್ಯ ಈ ಪ್ರಕರಣದಲ್ಲಿ ಈಗಾಗಲೆ 6 ಮಂದಿ ಆರೋಪಿಗಳು ಪೊಲೀಸ್ ವಶದಲ್ಲಿದ್ದು ತನಿಖೆ ಮುಂದುವರಿಸಲಾಗಿದೆ.

error: Content is protected !!