ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಬೆಳ್ತಂಗಡಿ ಪ್ರವಾಸ: ಸುಬೇದಾರ್ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆಗೈದ ಕ್ಯಾಪ್ಟನ್

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರು ಮಾ 24 ರಂದು ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ದೇವಸ್ಥಾನ ಸೇರಿದಂತೆ ಪಕ್ಷದ ಪ್ರಮುಖರ ಗಣ್ಯರ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಸುಬೇದಾರ್ ಏಕನಾಥ ಶೆಟ್ಟಿ ಗುರುವಾಯನಕೆರೆ ಅವರ ಮನೆಗೆ ಭೇಟಿ ನೀಡಿ ಏಕನಾಥ ಶೆಟ್ಟಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.

ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಸದಸ್ಯರುಗಳು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

error: Content is protected !!