ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಧರ್ಮಸ್ಥಳ, ಸುರ್ಯ ದೇವಸ್ಥಾನಕ್ಕೆ ಭೇಟಿ

 

ಬೆಳ್ತಂಗಡಿ: ಚಲನಚಿತ್ರ ನಟ ರಕ್ಷಿತ್ ಶೆಟ್ಟಿಯವರು ಕುಕ್ಕೆ ಸುಬ್ರಹ್ಮಣ್ಯ   ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ   ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರುಶನ ಪಡೆದರು.ನಂತರ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

 

 

ಬಳಿಕ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ  ಮನೆಗೆ ಭೇಟಿ ನೀಡಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಆಶೀರ್ವಾದ ಪಡೆದರು. ಅಲ್ಲಿಂದ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವತಿಯಿಂದ ಆಡಳಿತ ಮೊಕ್ತೇಸರ ಸತೀಶ್ಚಂದ್ರ ಸುರ್ಯಗುತ್ತು   ಅವರನ್ನು  ಗೌರವಿಸಿದರು.

 

 

 

ಈ ಸಂದರ್ಭದಲ್ಲಿ ಉದ್ಯಮಿ ಶಶಿಧರ್ ಶೆಟ್ಟಿ, ರವಿ ಚಕ್ಕಿತ್ತಾಯ, ರವಿ ಶೆಟ್ಟಿ ಕಳಸ ಜೊತೆಗಿದ್ದರು.

error: Content is protected !!