ಬೆಳ್ತಂಗಡಿ : 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ, ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ.27ರಂದು ಸ್ವೀಪ್ ಕಾರ್ಯಕ್ರಮ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಕಾರ್ಯಕ್ರಮ ನಡೆದಿದ್ದು ಈ ವೇಳೆ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ‘ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಯುವ ಮತದಾರರು ತಮ್ಮ ತಮ್ಮ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಂಡು ತಪ್ಪದೇ ಮತದಾನದಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರು ಪ್ರಮುಖ ಪಾತ್ರ ವಹಿಸಬೇಕು’ ಎಂದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷರು ವೈಜಣ್ಣ, ಕಾಲೇಜಿನ ಪ್ರಾಂಶುಪಾಲರಾದ ರಮೇಶ್, ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೆöÊನರ್ ಯೋಗೇಶ ಹೆಚ್.ಆರ್, ತಾಲೂಕು ಪಂಚಾಯತ್ ಅಧೀಕ್ಷಕರಾದ ಡಿ. ಪ್ರಶಾಂತ್, ಮಾಲಾಡಿ ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಯಶೋಧರ ಶೆಟ್ಟಿ ಹಾಗೂ ನರೆಗಾ ಯೋಜನೆಯ ಐಇಸಿ ಸಂಯೋಜಕರಾದ ವಿನಿಷ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.