ಉಜಿರೆ: ಸಿದ್ದವನದಬಳಿ ರಸ್ತೆಗೆ ಬಿದ್ದ ಒಣ ಮರ: ವಾಹನ ಸಂಚಾರಕ್ಕೆ ತೊಂದರೆ: ತಪ್ಪಿದ ಅನಾಹುತ!

ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ರಸ್ತೆಯ ಸಿದ್ದವನ ಬಳಿ ಒಣಗಿದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಅದೃಷ್ಟವಶಾತ್ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಕಳೆದ ಕೆಲವು ದಿನಗಳಿಂದ ಮರ ಒಣಗಿದ್ದು ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸುವುದಕ್ಕೆ ಮುಂದಾಗದಿರುವುದು ಸಾರ್ವಜನಿಕರಿಗೆ ಬೇಸರವನ್ನುಂಟು ಮಾಡಿದೆ. ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರೂ ವಾಹನಗಳು ಸಂಚರಿಸುತ್ತಿರುತ್ತದೆ. ಒಂದು ವೇಳೆ ಏನಾದರೂ ಅಪಾಯ ಸಂಭವಿಸುತಿದ್ದಲ್ಲಿ ಅದಕ್ಕೆ ಹೊಣೆ ಯಾರು ಎಂಬ ಪ್ರಶ್ನೆಯನ್ನು ಮಾಡುತಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ರಸ್ತೆ ಬದಿಯ ಮರ ಉರುಳಿ ಬಿದ್ದು ಕಾರಿನಲ್ಲಿ ಸಂಚಾರಿಸುತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೂಡ ನಡೆದಿತ್ತು.

error: Content is protected !!