ಕನ್ಯಾನ ಸದಾಶಿವ ಶೆಟ್ಟಿ ಮಾತೃಶ್ರೀ ಕನ್ಯಾನ ಲೀಲಾವತಿ ಶೆಟ್ಟಿ ನಿಧನ:

 

 

ಬೆಳ್ತಂಗಡಿ:, ಕೊಡುಗೈ ದಾನಿ ಹಲವಾರೂ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಬಂಟರ ಸಂಘಗಳ ಮಹಾ ಪೋಷಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರ ಮಾತೃಶ್ರೀ

ಕನ್ಯಾನ ದಿವಂಗತ ಪಕೀರ ಶೆಟ್ಟಿ ಅವರ ಧರ್ಮಪತ್ನಿ ಶ್ರೀಮತಿ ಲೀಲಾವತಿ ಶೆಟ್ಟಿಯವರು(90) ಇಂದು  ಬೆಳಿಗ್ಗೆ ನಿಧನ ಹೊಂದಿದ್ದಾರೆ.  ಸಂಜೆ 3 ಗಂಟೆಗೆ ಅವರ ಮೃತದೇಹದ ಅಂತ್ಯ ಕ್ರಿಯೆ ಸ್ವಗೃಹದಲ್ಲಿ ನಡೆಯಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಮಕ್ಕಳಾದ ಕನ್ಯಾನ ಸದಾಶಿವ ಶೆಟ್ಟಿ,,ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ ,ವಿಜಯಲಕ್ಷ್ಮಿ ಶೆಟ್ಟಿ, ದಿವಾಕರ ಶೆಟ್ಟಿ,, ನಿತ್ಯಾನಂದ ಶೆಟ್ಟಿ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಗಣ್ಯರಿಂದ ಸಂತಾಪ

ನಿಧನದ ಸುದ್ದಿ ತಿಳಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ  , ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ , ಯಕ್ಷಧ್ರುವ ಪಟ್ಲ ಪೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ   ಸೇರಿದಂತೆ  ಹಲವಾರೂ ಗಣ್ಯರು   ಸಂತಾಪ ಸೂಚಿಸಿದ್ದಾರೆ.

error: Content is protected !!