ಗುರುವಾಯನಕರೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ : ಓರ್ವ ಸಾವು : ಇಬ್ಬರಿಗೆ ಗಂಭೀರ ಗಾಯ!

 

 

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರ ಮಧ್ಯಾಹ್ನ ಸಂಭವಿಸಿದೆ

ಗುರುವಾಯನಕೆರೆಯಿಂದ ಮೂಡಬಿದಿರೆ ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ  ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಲಾಯಿಲ  ನಿವಾಸಿ ರಬ್ಬರ್ ಇಂಡಿಯ ಮಾಲಕ ವಿ.ವಿ. ಮ್ಯಾಥ್ಯು ಅವರ ಮಗ  ಪ್ರ್ರೈಸ್ ಮ್ಯಾಥ್ಯು (32) ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು   ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!