ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ: ಪದಪ್ರಧಾನ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶ

 


ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಬೂತ್ ಸಮಿತಿ, ಶಕ್ತಿ ಕೇಂದ್ರ , ಮಹಾ ಶಕ್ತಿ ಕೇಂದ್ರ ಹಾಗೂ ವಿವಿಧ ಮೋರ್ಚಾಗಳ ಮತ್ತು ಮಂಡಲಗಳ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶವು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ವಹಿಸಿದ್ದರು. ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭಾ ಅಭ್ಯರ್ಥಿ ಬೃಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ,ಬಿಜೆಪಿ ಮಂಡಲದ ಪದಾಧಿಕಾರಿಗಳಾದ ಪ್ರಶಾಂತ್ ಪಾರೆಂಕಿ,ಶಶಿರಾಜ್ ಶೆಟ್ಟಿ ಶಕ್ತಿ ನಗರ, ಸೇರಿದಂತೆ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಕಾರ್ಯದರ್ಶಿ

ಜಯಾನಂದ ಗೌಡ ಸ್ವಾಗತಿಸಿದರು, ರಾಜೇಶ್ ಪೆರ್ಬುಡ ಕಾರ್ಯಕ್ರಮ ನಿರ್ವಹಿಸಿದರು.

error: Content is protected !!