ಬೆಳ್ತಂಗಡಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಭಾ.ಆ.ಸೇ(ನಿ) ದ.ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಭೇಟಿ
ಬೆಳ್ತಂಗಡಿ : ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತçದ್ ಭಾ.ಆ.ಸೇ (ನಿ) ದ.ಕ ಜಿಲ್ಲೆ ಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿಧ ಸ್ಥಳಗಳಿಗೆ ಏ02ರಂದು ಭೇಟಿ ನೀಡಿ ಮತದಾರೊಂದಿಗೆ ಸಂವಾದ ನಡೆಸಿದರು.
ಸೌತಡ್ಕ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಸ್ವೀಪ್ ಸಮಿತಿ ವತಿಯಿಂದ ಎಲ್ಲಾ ಶಾಲೆಗಳು, ಅಂಗನವಾಡಿ , ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗಾಗಿ ಸಿದ್ಧಪಡಿಸಿರುವ ಪೋಸ್ಟರ್ ಅನ್ನು ಬಿಡುಗಡೆ ಮಾಡಿ, ಮತದಾರರ ಸಮಸ್ಯೆಗಳನ್ನು, ಸಂದೇಹಗಳನ್ನು ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತದೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಜೊತೆಗೆ ಮತದಾನ ಬಹಿಷ್ಕಾರಿಸುವುದರಿಂದ ಯಾವ ಫಲವೂ ಸಿಗುವುದಿಲ್ಲ ಬದಲಾಗಿ ಮತದಾನದ ಹಕ್ಕು ಚಲಾಯಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮತದಾರರು ಪ್ರಯತ್ನಿಸಬೇಕೆಂದು ಎಂದರು. ವಿಶೇಷವಾಗಿ ಇವಿಎಂ ಮಿಷನ್ ನ ಸದೃಢತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ , ತಾಲೂಕು ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷರು ವೈಜಣ್ಣ , ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ ರಾವ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ , ತಾಲೂಕು ಪಂಚಾಯತ್ ಅಧೀಕ್ಷಕರಾದ ಡಿ. ಪ್ರಶಾಂತ್ ಗ್ರಾಮ ಪಂಚಾಯತ್ ಪಿಡಿಒ ದೀಪಕ್ ಕುಮಾರ್ ಟಿಎಲ್ ಎಂ ಟಿ ರವಿಕುಮಾರ್ ಉಪಸ್ಥಿತರಿದ್ದರು.