ಹೆರಿಗೆ ವೇಳೆ ವಿಪರೀತ ರಕ್ತಸ್ರಾವ, ಲಾಯಿಲದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಸಾವಿಗೆ ಕಾರಣ ಕುಟುಂಬಸ್ಥರ ಆರೋಪ:

 

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಎಂಬವರು ಎರಡನೇ ಹೆರಿಗೆಗಾಗಿ ಎ 03 ರಂದು ಆಸ್ಪತ್ರೆಗೆ ದಾಖಲಾಗಿದ್ದರು.ಎ04 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.ಅದರೆ  ಈ ಬಗ್ಗೆ  ಯಾವುದೇ ಪೊಲೀಸ್  ದೂರು ಕೂಡ ದಾಖಲಾಗದೇ ಇರುವ    ಬಗ್ಗೆಯೂ ಜನರು ಮಾತನಾಡಿಕೊಳ್ಳುತಿದ್ದಾರೆ.‌ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು    ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

error: Content is protected !!