ಬೆಂಗಳೂರು : ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಅತಿ ಹೆಚ್ಚಿನ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.
ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದು, ಶೇ 94.89ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ.
ಈ ಬಾರಿ ಶೇಕಡಾ 81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮಿ 598 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಳಗ್ಗೆ 11 ಗಂಟೆ ಬಳಿಕ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿಯೂ ವೀಕ್ಷಿಸಬಹುದಾಗಿದೆ