ಮಂಡ್ಯ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ: ತೀವ್ರ ಕುತೂಹಲ ಮೂಡಿಸಿದ ಕಾಟೇರನ ನಡೆ!

ಮಂಡ್ಯ: ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಈ ಹಿಂದಿನ ಚುನಾವಣೆಯಲ್ಲಿ ಪ್ರಚಾರ ನಡೆಸಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ.

ಇಂದು (ಏ.18) ಮಂಡ್ಯ ಲೋಕಸಭಾ ಅಖಾಡದಲ್ಲಿ ಬೆಳಗ್ಗೆಯಿಂದಲೇ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸಲಿರುವ ನಟ ದರ್ಶನ್ ಅವರು ಬಳಿಕ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ ಪಟ್ಟಣ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ(ತಳಗವಾದಿ), ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ಸ್ಟಾರ್ ನಟ ದರ್ಶನ್ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವುದು ಸದ್ಯ ಅನೇಕರ ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ತೀವ್ರ ಕುತೂಹಲ ಕೆರಳಿಸಿದೆ.

error: Content is protected !!