ಬೆಳ್ತಂಗಡಿ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಯಾಗಿ ನಿವೃತ್ತಿಯಾಗಿದ್ದ ಡಾ. ಆದಂ ನಿಧನ:

 

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ
ತಲಪಾಡಿ ಕೆ.ಸಿ ರೋಡ್ ನಿವಾಸಿ ಡಾ! ಆದಂ ಉಸ್ಮಾನ್ ಅಲ್ಪಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.ಇವರು ಈ ಮೊದಲು ಪುತ್ತೂರು,ಕಡಬ ಆಸ್ಪತ್ರೆಯಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು 14ವರ್ಷಗಳ ಕಾಲ ಸರಕಾರಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು.ಮೃತದೇಹ ತಮ್ಮ ಮನೆಯಾದ ಕೆ,ಸಿ ರೋಡ್ ಮಂಗಳೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.ಮ್ರತರ ಅಂತ್ಯ ಕ್ರಿಯೆ ನಾಳೆ ಬೆಳಗ್ಗೆ 5.30 ಕ್ಕೆ.ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಿದ ನಂತರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ

error: Content is protected !!