ಉಜಿರೆ: ಚರಂಡಿ ಸ್ಲ್ಯಾಬ್ ಮೇಲೆ ಕುಳಿತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು!

ಬೆಳ್ತಂಗಡಿ: ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ.

ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ ಸ್ಲ್ಯಾಬ್ ಮೇಲೆ ಕುಳಿತಿದ್ದ ಸುಮಾರು 35-40 ವರ್ಷದ ವ್ಯಕ್ತಿ ಅಲ್ಲೆ ರಸ್ತೆಗೆ ಉರುಳಿ ಬಿದ್ದು ಸಾವನ್ನಪ್ಪಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಬಂದ ಪೊಲೀಸರು  ಪರಿಶೀಲನೆ ನಡೆಸಿ‌ದ್ದಾರೆ. ಮೃತ ದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದೆ.

ಮೃತ ವ್ಯಕ್ತಿ ಅಪರಿಚಿತನಂತೆ ಕಾಣುತಿದ್ದು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.

ಅಪರಿಚಿತ ಗಂಡಸಿನ ಮೃತದೇಹದ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

error: Content is protected !!