ದ.ಕ: 2024ರ ಲೋಕಸಭೆ ಚುನಾವಣೆಗೆ ನಕ್ಸಲರ ಆತಂಕ: ನಕ್ಸಲ್ ಪೀಡಿತ ಪ್ರದೇಶದ ಮತಗಟ್ಟೆಗಳಿಗೆ ಭಾರೀ ಭದ್ರತೆ: ಪೊಲೀಸ್ ಕಮೀಷನರ್ ಹಾಗೂ ಜಿಲ್ಲಾಧಿಕಾರಿಯಿಂದ ಹಲವರಿಗೆ ವಾರ್ನಿಂಗ್!

ದ.ಕ : ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಯ ಕರ್ನಾಟಕದ ಮೊದಲ ಹಂತದ ಮತದಾನ ನಡೆಯಲಿದ್ದು ಮತದಾನ ಪ್ರಕ್ರಿಯೆಗೆ ಯಾವುದೇ ಅಡಚಣೆ ಆಗದಂತೆ ತಡೆಯಲು ದ.ಕ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲರ ಆತಂಕ ಹೆಚ್ಚಾಗಿದ್ದು ಹೀಗಾಗಿ ಪೊಲೀಸ್ ಇಲಾಖೆ 18 ನಕ್ಸಲ್ ಪೀಡಿತ ಪ್ರದೇಶವನ್ನ ಗುರುತಿಸಿ, ಕಟ್ಟೆಚ್ಚರ ವಹಿಸಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ, ಜಿಲ್ಲಾಧಿಕಾರಿ ಮುಲ್ಯೆöÊ ಮುಹಿಲನ್ ಮತ್ತು ಪೊಲೀಸ್ ಕಮೀಷನರ್ ಅನುಪಮ್ ಅಗರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶದ ಮತಗಟ್ಟೆಗಳಿಗೆ ಸಿಎಪಿಎಫ್ ಪಡೆಯನ್ನು ನಿಯೋಜಿಸಲಾಗಿದೆ. ಪೊಲೀಸ್ ಇಲಾಖೆಯೊಂದಿಗೆ ನಕ್ಸಲ್ ನಿಗ್ರಹ ಪಡೆ ಕಣ್ಗಾವಲಿಗೆ ಇರಲಿದೆ. ನಕ್ಸಲ್ ನಿಗ್ರಹ ಪಡೆ ಈಗಾಗಲೆ ಕಾಡಿನಲ್ಲಿ ಕೂಬಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದೆ. ಮತದಾರರು ಯಾವುದೇ ಆತಂಕ ಇಲ್ಲದೆ, ಅನುಮಾನ ಇಲ್ಲದೆ ಮತದಾನ ಮಾಡಿ ಎಂದು ಹೇಳಿದ್ದಾರೆ.

ಮತಗಟ್ಟೆಯಲ್ಲಿ 1600 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಸಿ.ಎ.ಪಿಎಫ್, ಕೆ.ಎಸ್.ಆರ್.ಪಿ, 560 ಹೋಮ್ ಗಾರ್ಡ್, ಎ.ಎನ್.ಎಫ್, ಫಾರೆಸ್ಟ್ ಗಾರ್ಡ್ಸ್ ಭದ್ರತೆಗೆ ಇರುತ್ತಾರೆ . ಏನೇ ಸಮಸ್ಯೆ ಆದರೂ ನಮಗೆ ತಿಳಿಸಿ. ನೈತಿಕ ಪೊಲೀಸ್ ಗಿರಿ ನಡೆಸುವುದು, ಅಡ್ಡಗಟ್ಟುವುದು ಮಾಡಿದರೆ ಸಹಿಸಲ್ಲ. ಅಂತವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಏ.24ರ ಸಂಜೆ 6 ಗಂಟೆ ಬಳಿಕ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು ಕ್ಷೇತ್ರದಲ್ಲಿ ಇರಬಾರದು. ಸಂಜೆ 6 ಗಂಟೆಗೆಯಿAದ ಬಹಿರಂಗ ಪ್ರಚಾರ ಮುಕ್ತಾಯವಾಗಲಿದ್ದು, ಆ ಬಳಿಕ ರ್ಯಾಲಿ, ಬೀದಿ ಬೀದಿ ಪ್ರಚಾರಗಳು ಮಾಡುವಂತಿಲ್ಲ. ಮನೆ ಮನೆಗೆ ಹೋಗಿ ಪ್ರಚಾರ ಮಾಡುವ ಅವಕಾಶ ಬಿಟ್ಟು ಬೇರೆ ಯಾವುದೇ ಅವಕಾಶ ಇಲ್ಲ. ಸಂಜೆ 6 ಗಂಟೆಯಿAದ ಎಪ್ರಿಲ್ 26ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದ್ದು ಖಾಸಗಿ ಕಾರ್ಯಕ್ರಮದ ನೆಪದಲ್ಲಿ ರಾಜಕೀಯ ಕಾರ್ಯಕ್ರಮ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಭದ್ರತೆ ದೃಷ್ಟಿಯಿಂದ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ 1157 ರೌಡಿ ಆಸಾಮಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. 75 ಜನ ರೌಡಿಗಳನ್ನು ಗಡಿಪಾರು ಮಾಡಲಾಗಿದ್ದು, 806 ರೌಡಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಷರತ್ತು ಉಲ್ಲಂಘನೆ ಮಾಡಿದರೆ ಅಂತವರ ಬಾಂಡ್ ಹಣ ಮುಟ್ಟುಗೋಲು ಹಾಕುತ್ತೇವೆ. 8 ಜನ ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ. ಈ ಹಿಂದಿನ ಚುನಾವಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ಮೇಲೂ ಕ್ರಮ ಆಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

error: Content is protected !!