ಬಸ್ಸಿನಡಿ ಸಿಲುಕಿ ಮಹಿಳೆ ದಾರುಣ ಸಾವು: ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದುರ್ಘಟನೆ

 

ಬೆಳ್ತಂಗಡಿ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್ ನಿಲ್ಲಾಣದಲ್ಲಿ ಎ.24 ರಂದು ಸಂಭವಿಸಿದೆ.

ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆ ಸೇರಿ 8 ಜನ ಮಂಡ್ಯ ಜಿಲ್ಲೆಯ ಮೇಲುಕೋಟೆಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರು ಪಡೆದುಕೊಂಡು ಊರಿಗೆ ಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಪೊಲೀಸರು ನೀಡಿದ್ದಾರೆ.

error: Content is protected !!