ಮಾಚಾರು : ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ: ಬೈಕ್ ಪೀಸ್, ಪೀಸ್..!


ಬೆಳ್ತಂಗಡಿ: ಬೆಳಾಲು ಉಜಿರೆ ರಸ್ತೆಯ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು (ಮೇ.02)ಅಪಘಾತ ಸಂಭವಿಸಿದೆ.


ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದ್ದು ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ.

error: Content is protected !!