ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ಮೇ.3 ರಂದು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗೆ ಸ್ಪಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸರು ಸರಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಆಡಳಿತ ಸೌಧ ಭೇಟಿ ನೀಡಿದ ಸಂದರ್ಭದಲ್ಲಿ ಮಹಿಳೆಯೋರ್ವರ 7 ತಿಂಗಳ ಹೋರಾಟಕ್ಕೆ ಪ್ರತಿಫಲ ಸಿಗುವಂತೆ ಮಾಡಿದ್ದಾರೆ.
ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಮೃತರಾಗಿದ್ದು, ನಂತರ ಏಳು ತಿಂಗಳಿನಿAದ ಇವರಿಗೆ ಪಡಿತರ ಅಕ್ಕಿ ವಿತರಣೆ ಆಗಿರಲಿಲ್ಲ. ಹೀಗಾಗಿ ಈ ಮಹಿಳೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ಸುನಿತಾ ಅವರನ್ನು ಮತ್ತು ಆಹಾರ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ 7 ತಿಂಗಳು ಮಹಿಳೆಗೆ ಪಡಿತರ ದೊರಕದಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿದ ಲೋಕಾಯುಕ್ತ ಅಧಿಕಾರಿಗಳು ಮಹಿಳೆಗೆ ಪಡಿತರ ಸಿಗುವಂತೆ ಮಾಡಿದ್ದಾರೆ.
ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗುತ್ತಿಲ್ಲ, 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಹಂಚಿಕೆಯಾಗಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷಿö್ಮÃ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ, 94ಸಿಸಿ ವಿಚಾರಗಳ ಬಗ್ಗೆ ಕೂಡ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇದಕ್ಕೆ ಸ್ಪಂದನೆ ನೀಡಿದ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಆಡಳಿತ ಸೌದ ಭೇಟಿ ಸಂದರ್ಭದಲ್ಲಿ ಡಿವೈಎಸ್ಪಿ ಡಾ.ಗಾನ.ಪಿ.ಕುಮಾರ್ , ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಗಳಾದ ಅಮನುಲ್ಲಾ.ಎ, ಸುರೇಶ್.ಕೆ.ಎನ್,ಸುರೇಶ್.ಸಿ.ಎಲ್ ಮತ್ತು ಸಿಬ್ಬಂದಿಗಳು ಜೊತೆಗಿದ್ದರು.