ಧರ್ಮಸ್ಥಳ: ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಧರ್ಮಸ್ಥಳ ಸಮೀಪದ ನೇತ್ರಾವತಿ ಬಳಿ ಮಧ್ಯಾಹ್ನ ನೀರಿನ ಬಾಟಲ್ ಹಿಡಿದು ವ್ಯಕ್ತಿ ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಮಹಾರುದ್ರ ಸ್ವಾಮಿ (42) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ವೇಣೂರು ಹಾಗೂ ಧರ್ಮಸ್ಥಳ ಶೌರ್ಯ ತಂಡದ ಸಹಕಾರದಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.