ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಈ ಬೆನ್ನಲ್ಲೆ ಕೋವಿಶೀಲ್ಡ್ ಲಸಿಕೆ ತಯಾರಕಾ ಕಂಪನಿ ಅಸ್ರ್ಟಾಜೆನೆಕಾನ ಇದೀಗ ಪ್ರಪಂಚದಾದ್ಯಂತ ಔಷಧ ಮಾರುಕಟ್ಟೆಗಳಿಂದ ಲಸಿಕೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದ್ದು, ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬ್ರಿಟಿಷ್ ಹೈಕೋರ್ಟ್‍ನಲ್ಲಿ ಸಲ್ಲಿಸಿದ ದಾಖಲೆಗಳ ಪ್ರಕಾರ, ಕಂಪನಿಯು ತನ್ನ ಕೊರೊನಾ ಲಸಿಕೆ ಥ್ರಂಬೋಸಿಸ್, ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‍ಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದು ತೀವ್ರತರವಾದ ಪ್ರಕರಣಗಳಲ್ಲಿ ಪಾರ್ಶ್ವವಾಯು ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಹೇಳಿತ್ತು. ಆದರೆ ಕೋವಿಶೀಲ್ಡ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಅಸ್ಟ್ರಾಜೆನೆಕಾ ಹೇಳಿದೆ.