ಐಪಿಎಸ್ ಮತ್ತು ಐಎಎಸ್ ಮಹಿಳಾ ಅಧಿಕಾರಿಗಳ ವಿವಾದ ಪ್ರಕರಣ: ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಸುಪ್ರೀಂ ಕೋರ್ಟ್ ಸಲಹೆ: ಸಂಧಾನಕ್ಕೆ ಒಪ್ಪುತ್ತಾರ ರೂಪ-ರೋಹಿಣಿ?

ನವದೆಹಲಿ: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳನ್ನು ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಸಲಹೆ ನೀಡಿದೆ.

ಐಪಿಎಸ್ ಅಧಿಕಾರಿಯಾಗಿರುವ ರೂಪಾ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ರೋಹಿಣಿ ಸಿಂಧೂರಿ ಅವರು ಮನೆ ಹಾಳು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಸಾವನ್ನೂ ತಳುಕು ಹಾಕಿದ ರೂಪಾ ಅವರು ಇತರ ಐಎಎಸ್ ಅಧಿಕಾರಿಗಳಿಗೆ ಅಸಭ್ಯ ಚಿತ್ರಗಳನ್ನು ರಾತ್ತಿ ಹೊತ್ತು ಕಳುಹಿಸುತ್ತಿದ್ದಾರೆ. ಬೇರೆ ಐಎಎಸ್ ಅಧಿಕಾರಿಗಳ ಮನೆ ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.


ಈ ಬಗ್ಗೆ ರೋಹಿಣಿ ಸಿಂಧೂರಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕ್ ಮತ್ತು ಪಂಕಜ್ ಮಿತ್ತಲ್ ಅವರ ನೇತೃತ್ವದ ವಿಭಾಗೀಯ ಪೀಠ, “ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ. ಇಬ್ಬರು ಒಮ್ಮತದ ನಿರ್ಧಾರಕ್ಕೆ ಬಂದು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ”.

error: Content is protected !!