ಮೇ.09 : ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರ ಫಲಿತಾಂಶ ಮೇ 09 (ನಾಳೆ) ಪ್ರಕಟಗೊಳ್ಳಲಿದೆ.

ಮಾ.25ರಿಂದ ಏ.06ರ ವರೆಗೆ ನಡೆದಿದ್ದ 10ನೇ ತರಗತಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿದ್ದು ನಾಳೆ ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಿದೆ/

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಇದೇ ಸಂದರ್ಭದಲ್ಲಿ ಪರೀಕ್ಷೆ-2ರ ವಿವರ ಇತ್ಯಾದಿಗಳ ಮಾಹಿತಿಯನ್ನು ಕೂಡ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

error: Content is protected !!