ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ ದಕ್ಷಿಣ ಕನ್ನಡ ದ್ವಿತೀಯ: ಈ ಬಾರಿಯೂ ಮೈಲುಗೈ ಸಾಧಿಸಿದ ಬಾಲಕಿಯರು

 

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು ಉಡುಪಿ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆ ಶೇ.92.12 ರಷ್ಟು ಫಲಿತಾಂಶ ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ 88.67%, ಕೊಡಗು ಜಿಲ್ಲೆ 88.67% ಫಲಿತಾಂಶ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 2,87,416 ಮಂದಿ ಬಾಲಕರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 65.90 ಇದೆ. 3,43,788 ಬಾಲಕಿಯರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 81.11 ಇದೆ.

error: Content is protected !!