ಬೆಳ್ತಂಗಡಿ : ತಾಲೂಕಿನ ಮಾಜಿ ಶಾಸಕ , ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ. ವಸಂತ ಬಂಗೇರ ಅವರ ಸ್ವಗೃಹರಾಗಿದ್ದು ಈಗಾಗಲೆ ತಾಲೂಕಿನ ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನ ನಡೆಯುತ್ತಿದ್ದು ಸಾವಿರಾರು ಜನ ಕೆ.ವಸಂತ ಬಂಗೇರ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಈಗ ಬೆಳ್ತಂಗಡಿ ಬಸ್ ನಿಲ್ದಾಣದ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ಸಾಗಿದ್ದು ಕುವೆಟ್ಟು ಗ್ರಾಮದ ಕೇದೆ ಹೊಸಮನೆಯಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಿ ಬಳಿಕ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ.