ಮೌನವಾಯಿತು ಪ್ರಶ್ನಿಸುವ ಧ್ವನಿ: ಪಂಚಭೂತಗಳಲ್ಲಿ ಲೀನವಾದ ಕೆ.ವಸಂತ ಬಂಗೇರ: ಅಂತಿಮ ನಮನದಲ್ಲಿ ರಾಜಕಾರಣಿಗಳು, ಗಣ್ಯರು ಭಾಗಿ

ಬೆಳ್ತಂಗಡಿ: ಹಿರಿಯ ರಾಜಕಾರಣಿ , ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಅನಾರೋಗ್ಯದಿಂದ ಮೇ.08ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಇಂದು (ಮೇ09) ಕುವೆಟ್ಟಿನ ಕೇದೆಯ ಹೊಸಮನೆಯಲ್ಲಿ ಅಂತಿಮ ಸಂಸ್ಕಾರ ನಡೆದಿದೆ.

 

 

 

ಬೆಂಗಳೂರಿನಿಂದ ಇಂದು ಬೆಳಗ್ಗೆ ಪಾರ್ಥೀವ ಶರೀರವನ್ನು ಹಳೆಕೋಟೆಯ ಮನೆಗೆ ತರಲಾಗಿದ್ದು, ಬಳಿಕ ಅಲ್ಲಿಂದ ಸಾರ್ವಜನಿಕ ಅಂತಿಮ ನಮನಕ್ಕಾಗಿ ತಾಲೂಕು ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಿಲಾಗಿತ್ತು. ಸಾವಿರಾರು ಅಭಿಮಾನಿಗಳು ಬಂದು ಕೆ. ವಸಂತ ಬಂಗೇರ ಅವರ ಅಂತಿಮ ದರ್ಶನವನ್ನು ಪಡೆದುಕೊಂಡಿದ್ದಾರೆ.

 

 

 

ರಾಜಕೀಯ ನಾಯಕರುಗಳಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ನಳಿನ್ ಕುಮಾರ್ ಕಟೀಲ್, ರಕ್ಷಿತ್ ಶಿವರಾಂ, ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಲೋಕಸಭಾ ಚುನಾವಣಾ ಅಭ್ಯರ್ಥಿ ಪದ್ಮರಾಜ್ ಆರ್, ಕೋಟ ಶ್ರೀನಿವಾಸ ಪೂಜಾರಿ, ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಜಯರಾಮ್ ಶೆಟ್ಟಿ ಪಡಂಗಡಿ, ಪ್ರಭಾಕರ ಭಟ್ ಕಲ್ಲಡ್ಕ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಸಂಜೀವ ಮಠಂದೂರು, ವಿನಯ ಕುಮಾರ್ ಸೊರಕೆ, ಜೆ.ಆರ್.ಲೋಬೋ, ಗಂಗಾಧರ ಗೌಡ, ಐವನ್ ಡಿ ಸೋಜಾ, ಕೃಷ್ಣ ಪಾಲೇಮಾರ್, ಮಾಜಿ ಶಾಸಕ ರುಕ್ಮಯ ಪೂಜಾರಿ, ಸೋಲೂರು ಮಠಾಧೀಶ ವಿಖ್ಯಾತನಂದ ಸ್ವಾಮೀಜಿ ಬಲ್ಯೊಟ್ಟು, ಬಿಷಪ್ ಲಾರೆನ್ಸ್ ಮುಕ್ಕುಯಿ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ, ನಾಗರಿಕ ಸೇವಾ ಟ್ರಸ್ಟ್ ಸಂಚಾಲಕ ಸೋಮನಾಥ ನಾಯಕ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಜಯಂತ ಕೋಟ್ಯಾನ್, ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಯುವಮೋರ್ಚಾದ ಮಾಜಿ ಅಧ್ಯಕ್ಷ ಸಂಪತ್ ಬಿ ಸುವರ್ಣ, ಧರಣೇಂದ್ರ ಕುಮಾರ್,ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಹಿರಿಯ ವಕೀಲ, ಬಿ.ಕೆ. ಧನಂಜಯ ರಾವ್, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಯೋಗೀಶ್ ನಡಕ್ಕರ, ನಾಗೇಶ್ ಕುಮಾರ್, ಜಿ.ಪಂ. ಮಾಜಿ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ, ಗೌಡರ ಯಾನೆ ಒಕ್ಕಲಿಗರ  ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಸೇರಿದಂತೆ ದಕ್ಷಿಣ ಜಿಲ್ಲೆಯ ಅನೇಕ ರಾಜಕಾರಣಿಗಳು, ಮುಸ್ಲೀಂ ಹಾಗೂ ಕ್ರೈಸ್ತ ಧರ್ಮದ ಧರ್ಮಗುರುಗಳು ಅನೇಕ ಮಹಿಳೆಯರು, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ಗುರುದೇವ ಕಾಲೇಜ್ ವಿದ್ಯಾರ್ಥಿಗಳು, ಕೆ. ವಸಂತ ಬಂಗೇರ ಅವರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

 

 

 

ಬಳಿಕ ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ನೇತೃತ್ವದಲ್ಲಿ ಸರಕಾರಿ ಗೌರವ ಸಲ್ಲಿಸಲಾಯಿತು. ಅಲ್ಲಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಮೂಲಕ ಸಾವಿರಾರು ಅಭಿಮಾನಿಗಳ ಸಮೂಹದಲ್ಲಿ ಅಂತಿಮಯಾತ್ರೆ ನಡೆದು ಕುವೆಟ್ಟು ಗ್ರಾಮದ ಕೇದೆ ಹೊಸಮನೆಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

error: Content is protected !!