ಬೆಳ್ತಂಗಡಿ ಪೊಲೀಸ್ ಠಾಣೆಗೆ ಶಾಸಕ ಹರೀಶ್ ಪೂಂಜ ಮುತ್ತಿಗೆ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲು;

 

 

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ ಅಪಾಯಕಾರಿ ಸ್ಫೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಮೋದ್ ದಿಡುಪೆ ಹಾಗೂ ಶಶಿರಾಜ್ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.ಪ್ರಮೋದ್ ದಿಡುಪೆ ತಪ್ಪಿಸಿಕೊಂಡಿದ್ದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದು ಈ ಬಗ್ಗೆ ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಲಾಗಿದೆ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಅಗ್ರಹಿಸಿ ಬೆಳ್ತಂಗಡಿ ಠಾಣೆಗೆ ಮಧ್ಯರಾತ್ರಿ ಮುತ್ತಿಗೆ ಹಾಕಿದ್ದರು.‌ಈ ವೇಳೆ ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿ ಸರ್ಕಾರಿ ಕರ್ತವ್ಯ ಅಡ್ಡಿಪಡಿಸಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ವಿರುದ್ಧ ಅ.ಕ್ರ.57/ 2024 ,ಕಲಂ 353,504 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ.

error: Content is protected !!