ಮೇ21 ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿ ಭೇಟಿ: ಮಾಜಿ ಶಾಸಕ ವಸಂತ ಬಂಗೇರರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ‌ ಭಾಗಿ:

 

 

 

 

 

ಬೆಳ್ತಂಗಡಿ; ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರ‌ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೇ 21ಮಂಗಳವಾರ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.
ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಗುರುವಾಯನಕೆರೆಗೆ ಬಂದು ಇಲ್ಲಿನ ಎಫ್.ಎಂ ಗಾರ್ಡನ್ ಮಂಜಿಬೆಟ್ಟು ಇಲ್ಲಿ ನಡೆಯುವ ದಿ! ಕೆ. ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .

error: Content is protected !!