ಮೇ 25: ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರಿಗೆ ‘ಸಾವಿರದ ನುಡಿ ನಮನ’ ಕಾರ್ಯಕ್ರಮ : ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಗಣ್ಯರು ಭಾಗಿ

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ‘ಸಾವಿರದ ನುಡಿನಮನಗಳು’ ಕಾರ್ಯಕ್ರಮ ಮೇ.25ರ ಶನಿವಾರ ಕಿನ್ಯಮ್ಮ ಯಾನೇ ಗುಣವತಿ ಅಮ್ಮಸಭಾಂಗಣದಲ್ಲಿ ನಡೆಯಲಿದೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾಧ್ಯಕ್ಷ ಯುಟಿ ಖಾದರ್ ಸೇರಿದಂತೆ ಹಲವಾರೂ ಸಚಿವರುಗಳು,ಶಾಸಕರುಗಳು, ಕಾರ್ಯಕರ್ತರು, ಸೇರಿದಂತೆ ಬಂಗೇರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಮಾಜಿ ಸ್ಫೀಕರ್ ರಮೇಶ್ ಕುಮಾರ್ ದಿಕ್ಷೂಚಿ ಭಾಷಣ ಮಾಡಲಿದ್ದಾರೆ. ಸುಮಾರು 7 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಗ್ರಾಮ ಸಮಿತಿಗಳ ಮೂಲಕ ಮಾಹಿತಿ ತಿಳಿಸಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, , ಪಕ್ಷದ ಪ್ರಮುಖರಾದ ಸಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್, ನೇಮಿರಾಜ್ ಕಿಲ್ಲೂರು, ನಮಿತಾ, ವಂದನಾ ಭಂಡಾರಿ ಇತರರು  ಉಪಸ್ಥಿತರಿದ್ದರು.

error: Content is protected !!