ಹಾಸನ, ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು:ಮಂಗಳೂರು ಆಸ್ಪತ್ರೆಯಿಂದ ಹಿಂದಿರುಗುತಿದ್ದ ವೇಳೆ ನಡೆದ ದುರ್ಘಟನೆ:

 

 

 

ಹಾಸನ:ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರೊಬ್ಬರನ್ನು ನೋಡಿ ಹಿಂದಿರುಗುತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಎಂಬಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ.
ಮೃತಪಟ್ಟವರನ್ನು
ಹೊಸಕೋಟೆ ತಾಲೂಕಿನ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ ರಾಕೇಶ್   ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು  ಕಾರಿನಲ್ಲಿ ತೆರಳಿದ್ದು . ಮಂಗಳೂರಿನಿಂದ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೇನರ್‌ಗೆ ಗುದ್ದಿದೆ. ನಜ್ಜುಗುಜ್ಜಾದ ಕಾರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.
ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!