ಬೆಳ್ತಂಗಡಿ : ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ(33) ಮೇಲೆ ಕಾಂಗ್ರೆಸ್ ಮುಖಂಡ ಮಾರಕಾಸ್ರ್ರದಿಂದ ಹಲ್ಲೆ ನಡೆಸಿದ ಘಟನೆ ಜೂ 04 ರ ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಎಂಬಾತ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ವಸಂತ್ ಅಚಾರ್ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ, ಕಾರ್ಯದರ್ಶಿ ಜಯಾನಂದ ಗೌಡ ಸೇರಿದಂತೆ ಬಿಜೆಪಿ ಪ್ರಮುಖರು ಭೇಟಿ ನೀಡಿದರಲ್ಲದೇ ಕಾಂಗ್ರೆಸ್ ಸರ್ಕಾರ ಬಂದ ನಂತರ ಬೆಳ್ತಂಗಡಿಯಲ್ಲಿ ವಿನಾಃ ಕಾರಣ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯವನ್ನು ಕಾಂಗ್ರೆಸ್ ನವರು ಮಾಡುತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಜಯ ಗಳಿಸಿದ ಬಗ್ಗೆ ಯುವಕರು ಸೇರಿ ವಿಜಯೋತ್ಸವ ಆಚರಿಸಿದನ್ನು ಸಹಿಸದೇ ರಕ್ಷಿತ್ ಶಿವರಾಂ ಅವರ ಮಾರ್ಗದರ್ಶನದಲ್ಲಿ ಅವರ ಬೆಂಬಲಿಗರು ವಿನಾಃ ಕಾರಣ ಹಲ್ಲೆ ನಡೆಸಿದ್ದಾರೆ. ಇದು ಖಂಡನೀಯ ಎಂದು ಆರೋಪಿಸಿದ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಈ ರೀತಿ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸೂಕ್ತ ಉತ್ತರವನ್ನು ಪ್ರತಿಭಟನೆ ಮೂಲಕ ನೀಡಲಾಗುವುದು. ಎಂದು ಆಕ್ರೋಶ ವ್ಯಕ್ತಪಡಿಸಿದರು..