ಕಳೆಂಜ ಬಿಜೆಪಿ ಮುಖಂಡನಿಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಕಾಂಗ್ರೆಸ್ ಮುಖಂಡನ ಬಂಧನ:

 

 

ಬೆಳ್ತಂಗಡಿ : ಬಿಜೆಪಿ ಮಂಡಲ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್. ಎಂಬವರ ಮೇಲೆ ಜೂ.4 ರಂದು ರಾತ್ರಿ ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ(48) ಎಂಬವರು ರಾಜೇಶ್ ಎಮ್.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ‌ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಾಲಪ್ಪ ಗೌಡ ಅವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆಗೊಳಗಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ
ದಾಖಲಾಗಿರುವ ರಾಜೇಶ್.ಎಮ್.ಕೆ ನೀಡಿದ ದೂರಿನ ಮೇರೆಗೆ ಆರೋಪಿ ಕುಶಲಪ್ಪ ಗೌಡರ ವಿರುದ್ಧ ಅಟ್ರಾಸಿಟಿ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!