ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ ಬಿಜೆಪಿ ಮುಖಂಡನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು:

 

 

 

ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು.  ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಕಾಯ್ದೆಯಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ ವಿರುದ್ಧ ಜೂ.5 ರಂದು ಮಾನಭಂಗ,ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

error: Content is protected !!