ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿದೆ.
ಮುಂಗಾರು ಮಾರುತಗಳು ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರತಿ ಗಂಟೆಗೆ ಚದುರಿದ ಗಾಳಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ ಎಂಬ ಮುನ್ನಚ್ಚರಿಕೆ ನೀಡಲಾಗಿದೆ.
ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕಲಬುರಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಂಡಮಾರುತದಿಂದ ಗಂಟೆಗೆ 55 ಕಿ.ಮೀ ವರೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಕರಾವಳಿಯ ಉದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.