ಪ್ರಧಾನಿ ಮೋದಿ ಪ್ರಮಾಣ ವಚನ ಸಂದರ್ಭ ಕಾಣಿಸಿಕೊಂಡ ನಿಗೂಢ ಪ್ರಾಣಿ: ‘ಆಧಾರ ರಹಿತ ವದಂತಿಗಳನ್ನು ನಂಬಬೇಡಿ’: ದೆಹಲಿ ಪೊಲೀಸರಿಂದ ಕಪ್ಪು ಪ್ರಾಣಿ ಬಗ್ಗೆ ಸ್ಪಷ್ಟನೆ

ನವದೆಹಲಿ: ಪ್ರಮಾಣ ವಚನ ಸ್ವೀಕಾರ ಸಮಾರಂಭ ವೇಳೆ ರಾಷ್ಟ್ರಪತಿ ಭವನದಲ್ಲಿ ಕಾಣಿಸಿಕೊಂಡ ಪ್ರಾಣಿ ಯಾವುದೋ ಕಾಡುಪ್ರಾಣಿ, ನಿಗೂಢ ಪ್ರಾಣಿಯಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಚಿರತೆಯಂತಹ ಪ್ರಾಣಿ ಕಂಡು ಬಂದಿತ್ತು. ಈ ಸುದ್ದಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಪ್ರಮಾಣವಚನ ಸಮಾರಂಭದ ವೇಳೆ ಕಂಡು ಬಂದ ಪ್ರಾಣಿ, ಸಾಮಾನ್ಯ ಮನೆಯ ಬೆಕ್ಕು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

error: Content is protected !!