ಕುವೈತ್: ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಜನರು ಸಾವನ್ನಪ್ಪಿದ ಘಟನೆ ಜೂ.12ರಂದು ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಸಂಭವಿಸಿದೆ. ಮೃತಪಟ್ಟವರಲ್ಲಿ 40 ಮಂದಿ ಭಾರತೀಯರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಒಂದು ಕಂಪನಿಗೆ ಸೇರಿದ್ದ 7 ಅಂತಸ್ತಿನ ಕಟ್ಟಡದಲ್ಲಿ ಸುಮಾರು 150ಕ್ಕೂ ಹೆಚ್ಚು ಕಾರ್ಮಿಕರು ಉಳಿದುಕೊಂಡಿದ್ರು. ನಿನ್ನೆ ಬೆಳ್ಳಂ ಬೆಳಗ್ಗೆ ಇವರುಗಳು ನಿದ್ದೆಯ ಮಂಪರಲ್ಲಿದ್ದ ಸಂದರ್ಭದಲ್ಲಿ ಅಡುಗೆಗೆ ಬಳಸಲಾಗುತ್ತಿದ್ದ ಗ್ಯಾಸ್ ಸಿಲಿಂಡರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡಕ್ಕೆ ವ್ಯಾಪಿಸಿತ್ತು. ನಿದ್ದೆಯಿಂದ ಎಚ್ಚರಗೊಳ್ಳುತ್ತಿದ್ದಂತೆ ಕಟ್ಟಡದ ಒಳಗೆ ಸಂಪೂರ್ಣವಾಗಿ ಕಪ್ಪು ಹೊಗೆ ತುಂಬಿಕೊAಡಿತ್ತು. ಅಲ್ಲಿದ್ದವರಿಗೆ ಉಸಿರು ಕಟ್ಟೋದಿಕ್ಕೆ ಆರಂಭವಾಗಿತ್ತು. ಈ ವೇಳೆ ಕೆಲವಷ್ಟು ಜನ ಕಟ್ಟದ ಕಿಟಕಿಯ ಗಾಜು ಒಡೆದು ಹೊರಗೆ ಹಾರಿ ಪ್ರಾಣ ಕಾಪಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದ್ರೆ ಈ ಸಂದರ್ಭದಲ್ಲಿ ಕೆಳಗೆ ಬಿದ್ದು ತೀವ್ರ ಗಾಯಗಳಾಗಿ ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಇದರಲ್ಲಿ ಹೆಚ್ಚಿನವರು ಭಾರತೀಯರೇ ಅನ್ನೋವಂತದ್ದು ಬಹಳಷ್ಟು ನೋವಿನ ಸಂಗತಿ.
ಭಾರತೀಯರ ಮೃತ ದೇಹಗಳನ್ನು ಆದಷ್ಟು ಬೇಗ ಸ್ವದೇಶಕ್ಕೆ ಕಳುಹಿಸಿಕೊಡುವಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕುವೈತ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿಗೆ ಸೂಚಿಸಿರುವ ಅವರು ಘಟನೆಯ ಬಗ್ಗೆಯೂ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿ ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ನ ಈ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.