ವಿಚಾರಣೆಗೆ ಹಾಜರಾಗದ ಬಿಎಸ್‌ವೈ: ಮಾಜಿ ಮುಖ್ಯಮಂತ್ರಿಗೆ ಬಂಧನ ಭೀತಿ: ಪೋಕ್ಸೋ ಪ್ರಕರಣದಲ್ಲಿ ಬಂಧನ ವಾರೆಂಟ್ ಜಾರಿ..!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ  ಬಂಧನ ವಾರೆಂಟ್ ಜಾರಿ ಮಾಡಿ ಆದೇಶಿಸಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಎರಡನೇ ಬಾರಿ ಸೂಚನೆ ನೀಡಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದರು. ಇದರಿಂದ ತನಿಖಾಧಿಕಾರಿಗಳು ವಾರೆಂಟ್ ಜಾರಿ ಮಾಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಮನವಿ ಆಲಿಸಿದ ನಗರದ 1ನೇ ತ್ವರಿತಗತಿಯ ನ್ಯಾಯಾಲಯ ಈ ಆದೇಶ ನೀಡಿದೆ.

error: Content is protected !!