ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಇಂದು (ಜೂ.14) ವಿಚಾರಣೆಗೆ ಬರಲಿದ್ದು ಒಂದು ವೇಳೆ ಅವರು ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡರೆ ಯಡಿಯೂರಪ್ಪ ಅವರು ಬಂಧನಕ್ಕೆ ಒಳಗಾಗುವುದು ಖಚಿತವಾಗಿದೆ.
ಜೂ.13ರಂದು ಬೆಂಗಳೂರಿನ ನ್ಯಾಯಾಲಯ ಬಿಎಸ್ ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯಲು ಕಾಯುತ್ತಿದ್ದಾರೆ. ಆದರೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಯಾಗಿ ಬಳಿಕ ಬಿ. ಎಸ್. ಯಡಿಯೂರಪ್ಪ ಅವರ ಭವಿಷ್ಯ ನಿರ್ಧರವಾಗಲಿದೆ.
ನಿನ್ನೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿರುವ ಹಿನ್ನಲೆ ಪೊಲೀಸರು ಯಡಿಯೂರಪ್ಪ ಅವರನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ದಟ್ಟವಾಗಿದೆ. ಇಂದಿನ ವಿಚಾರಣಾ ಅರ್ಜಿ ತಿರಸ್ಕೃತಗೊಂಡರೆ ಮಾಜಿ ಸಿಎಂಗೆ ಬಹುದೊಡ್ಡ ಸಂಕಷ್ಟ ಎದುರಾಗಲಿದೆ.