ಕೊಡುಗೈದಾನಿ ಉದ್ಯಮಿ ಎಂ ಆರ್ ಜಿ ಗ್ರೂಪ್ ‌ನ ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್:  ಮಂಗಳೂರು ವಿಶ್ವ ವಿದ್ಯಾಲಯದ 42 ನೇ ಘಟೀಕೋತ್ಸವದಲ್ಲಿ ಪ್ರಶಸ್ತಿ ಪ್ರಧಾನ;

 

 

 

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ 42ನೇ ವಾರ್ಷಿಕ ಘಟಿಕೋತ್ಸವ ಜೂನ್ 15ರಂದು ನಡೆಯಲಿದ್ದು, ಮೂವರು ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಎಂಆರ್​ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ ಸೇರಿದಂತೆ ಡಾ.ತುಂಬೆ ಮೊಯ್ದಿನ್ ಹಾಗೂ ರೊನಾಲ್ಡೋ ಕೊಲಾಸೋ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ. ಎಂದು  ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಧರ್ಮ  ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಘಟಿಕೋತ್ಸವದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆ, ಮಹಾ ನಿರ್ದೇಶಕರು ಪ್ರೊ. ಸಚಿನ್ ಚತುರ್ವೇದಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಲಿದ್ದಾರೆ. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಈ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭಾಗವಹಿಸಲಿದ್ದಾರೆ” ಎಂದರು.

error: Content is protected !!