ರಾಜ್ಯದ ಜನರಿಗೆ ಶಾಕ್ ನೀಡಿದ ಕಾಂಗ್ರೆಸ್ ಸರ್ಕಾರ: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ತಕ್ಷಣದಿಂದಲೇ ಜಾರಿ:

 

 

 

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನರಿಗೆ ಬೆಲೆ ಏರಿಕೆಯ ಶಾಕ್ ರಾಜ್ಯ ಸರ್ಕಾರ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ತೆರಿಗೆಯಲ್ಲಿ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ.

ಎಷ್ಟು ಹೆಚ್ಚಳ?;

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 3 ರೂ. ಮತ್ತು ಡೀಸೆಲ್​​ ದರದಲ್ಲಿ 3 ರೂ. 50 ಪೈಸೆ ಹೆಚ್ಚಳವಾಗಿದೆ.ಪೆಟ್ರೋಲ್ ಬೆಲೆ ಮೇಲಿನ ಪ್ರಸ್ತುತ 25.92% ಮಾರಾಟ ತೆರಿಗೆಯನ್ನು 29.84%ಗೆ ಏರಿಸಿ ಸುಮಾರು 3.92%ರಷ್ಟು ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಡಿಸೇಲ್ ಬೆಲೆಯನ್ನು ಪ್ರಸ್ತುತ 14.34% ದಿಂದ 18.44% ಗೆ ಏರಿಸಿ 4.1% ರಷ್ಟು ಮಾರಾಟ ತೆರಿಗೆಯನ್ನು ಹೆಚ್ಚಿಸಲಾಗಿದೆ. ಮಾರಾಟ ತೆರಿಗೆ ಹೆಚ್ಚಳದಿಂದ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ.

error: Content is protected !!