ಬೆಳ್ತಂಗಡಿ: ಹಲವಾರು ಮೂಲಭೂತ ಸೌಕರ್ಯಗಳ ಸಮಸ್ಯೆಯಿರುವ ಧರ್ಮಸ್ಥಳ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಮನವಿಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೋರಿದ್ದಾರೆ.